New Ration Application: ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇದೆ
ಇವತ್ತಿನ ದಿನ ರೇಷನ್ ಕಾರ್ಡ್ ಒಂದು ಉಪಯುಕ್ತವಾದ ದಾಖಲೆಯಾಗಿದೆ ಏಕೆಂದರೆ ರೇಷನ್ ಕಾರ್ಡ್ ಹೊಂದಿದವರು ಸರ್ಕಾರದ ಹಲವಾರು ಯೋಜನೆಗಳ ಸಬ್ಸಿಡಿ ಮತ್ತು ಇತರ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಬಹುದು ಹಾಗಾಗಿ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಾಯುತ್ತಿದ್ದಾರೆ ಹಾಗೂ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಆಸೆ ಪಡುತ್ತಿದ್ದಾರೆ ಅಂತವರಿಗೆ ಇದೀಗ ಸಿಹಿ ಸುದ್ದಿ, ಪ್ರಸ್ತುತ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭವಾಗಿದೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರ ಈ ಲೇಖನೆಯ ಮೂಲಕ ಮಾಹಿತಿ ತಿಳಿಯೋಣ
ಹೊಸ ರೇಷನ್ ಕಾರ್ಡ್ ಅರ್ಜಿ (New Ration Application) ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ..?
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಹೊಸದಾಗಿ ಬಿಪಿಎಲ್ ಹಾಗೂ ಅಂಥೋದಯ ಮತ್ತು ಎಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವಂಥವರಿಗೆ ಇದೀಗ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ, ಆದ್ದರಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವವರು ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು

ಇದರ ಜೊತೆಗೆ ರೇಷನ್ ಕಾರ್ಡ್ ತಿದ್ದುಪಡಿಗೂ ಕೂಡ ಅವಕಾಶ ಮಾಡಿಕೊಡಲಾಗಿದ್ದು ರೇಷನ್ ಕಾರ್ಡ್ ನಲ್ಲಿ ಕುಟುಂಬದ ಸದಸ್ಯರ ಬದಲಾವಣೆ ಹಾಗೂ ಹೊಸ ಸದಸ್ಯರ ಸೇರ್ಪಡೆ ಮತ್ತು ರೇಷನ್ ಕಾರ್ಡಿಗೆ ತಿದ್ದುಪಡಿಗೆ ಸಂಬಂಧಿಸಿದಂತೆ ಇತರ ಯಾವುದೇ ಕೆಲಸ ಮಾಡಲು ಅವಕಾಶವಿದೆ ಹಾಗಾಗಿ ತಿದ್ದುಪಡಿ ಮಾಡಿಸಲು ಬಯಸುವವರು ಕೂಡ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ಮೇಲೆ ತಿಳಿಸಿದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಕೊನೆಯ ದಿನಾಂಕ ಯಾವಾಗ..?
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವವರು ಹಾಗೂ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಿಸಲು ಬಯಸುವಂಥವರಿಗೆ ನಮ್ಮ ಕರ್ನಾಟಕದ ಆಹಾರ ಇಲಾಖೆ ಅರ್ಜಿ ಸಲ್ಲಿಸಲು ದಿನಾಂಕ 30 ಜೂನ್ 2025 ರವರೆಗೆ ಕೊನೆಯ ದಿನಾಂಕ ನಿಗದಿ ಮಾಡಿದೆ ಹಾಗಾಗಿ ಆಸಕ್ತಿ ಇರುವಂತಹವರು ಈ ದಿನಾಂಕದ ಒಳಗಡೆ ನೀವು ನಿಮಗೆ ಹತ್ತಿರವಾಗುವಂತ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಹಾಗೂ ಇತರ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಬಹುದು ಸಮಯ ಬೆಳಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ
ಅರ್ಜಿ ಸಲ್ಲಿಸಲು ಬೇಕಾಗುವ (New Ration Application) ಅಗತ್ಯ ದಾಖಲಾತಿಗಳು..?
- ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ರೇಷನ್ ಕಾರ್ಡ್
- ಈ-ಶ್ರಮ ಕಾರ್ಡ್
- ವಿಳಾಸದ ಪುರಾವೆಗಳು
- ಆರು ವರ್ಷದ ಒಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ
- ಇತರೆ ಅಗತ್ಯ ದಾಖಲಾತಿಗಳು
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿ, ಒಂದೇ ತಿಂಗಳಿಗೆ ರೇಷನ್ ಕಾರ್ಡ್ ಪಡೆಯುವುದು ಹೇಗೆ..?
ನೀವು ಹೊಸ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಿ ಕೇವಲ ಒಂದು ತಿಂಗಳಲ್ಲಿ ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುತ್ತಿದ್ದರೆ ನಿಮಗೆ ಭರ್ಜರಿ ಗುಡ್ ನ್ಯೂಸ್, ಹೌದು ಸ್ನೇಹಿತರೆ ರಾಜ್ಯ ಸರ್ಕಾರ ಹೊಸ ರೇಷನ್ ಕಾರ್ಡ್ ಕೇವಲ ಒಂದು ತಿಂಗಳ ಒಳಗಡೆ ಈ ಶ್ರಮ ಕಾರ್ಡ್ ಹೊಂದಿದವರಿಗೆ ನೀಡುತ್ತಿದೆ ಹಾಗಾಗಿ ನಿಮ್ಮ ಬಳಿ ಈ ಶ್ರಮ ಕಾರ್ಡ್ ಇದ್ದರೆ ಕೆಳಗಡೆ ನೀಡಿರುವ ಲಿಂಕ್ ಬಳಸಿಕೊಂಡು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಇದೇ ರೀತಿ ಪ್ರತಿದಿನ ಹೊಸ ಮಾಹಿತಿಗಳು ಹಾಗೂ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಸರಕಾರದ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಮಹಿಳೆಯರಿಗೆ ಸಂಬಂಧಿಸಿದ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು
1 thought on “New Ration Application: ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇದೆ”