Post office jobs: ಯಾವುದೇ (no exam) ಪರೀಕ್ಷೆ ಇಲ್ಲದೆ ಪೋಸ್ಟ್ (post office) ಆಫೀಸ್ ನಲ್ಲಿ ಕೆಲಸ ಸಿಗುತ್ತೆ! ಇಲ್ಲಿದೆ ನೋಡಿ ಸಂಪೂರ್ಣ ವಿವರ..
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಯಾವುದೇ ಪರೀಕ್ಷೆ ಇಲ್ಲದೆ ನೇರ ನೇಮಕಾತಿಯ ಮೂಲಕ ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಪೋಸ್ಟ್ ಆಫೀಸ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಆಯ್ಕೆಯ ವಿಧಾನ ಯಾವ ರೀತಿ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಪೋಸ್ಟ್ ಆಫೀಸ್ ಹೊಸ ನೇಮಕಾತಿ (Post office jobs)..?
ಹೌದು ಸ್ನೇಹಿತರೆ ಬಳ್ಳಾರಿ ಜಿಲ್ಲೆಯಲ್ಲಿ ಕೆಲಸ ಹುಡುಕುವಂತವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್! ಇದೆ ನಾಲ್ಕು ಜೂನ್ 2025 ರಂದು ಅಂಚೆ ಜೀವವಿಮೆ ಮತ್ತು ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳ ಮಾರಾಟ ಮಾಡಲು ನೇರ ಪ್ರತಿನಿಧಿಗಳನ್ನು ಹಾಗೂ ಫೀಲ್ಡ್ ಆಫೀಸರ್ ಹುದ್ದೆಗಳ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಆದ್ದರಿಂದ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೆ ನಾಲ್ಕು ಜೂನ್ 2025 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಮ್ಮ ಬಳ್ಳಾರಿ ಜಿಲ್ಲೆಯ ಬಳ್ಳಾರಿ ನಗರದ ಕೋಟೆಯ ಆವರಣದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ನೇರ ನೇಮಕಾತಿ ವಿಧಾನದ ಮೂಲಕ ಸಂದರ್ಶನ ಏರ್ಪಡಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ
ಪೋಸ್ಟ್ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಹೌದು ಸ್ನೇಹಿತರೆ ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 5,000 ಕ್ಕಿಂತ ಕಡಿಮೆ ಜನ ಸಂಖ್ಯೆಯಲ್ಲಿ ಹೊಂದಿರುವ ಪ್ರದೇಶಗಳಲ್ಲಿ ವಾಸ ಮಾಡುತ್ತಿದ್ದರೆ ಅಂತಹ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಐದು ಸಾವಿರಕ್ಕಿಂತ ಹೆಚ್ಚು ಜನ ಪ್ರದೇಶದಲ್ಲಿ ವಾಸ ಮಾಡುತ್ತಿದ್ದರೆ ಅಂತ ಅಭ್ಯರ್ಥಿಗಳು ಕನಿಷ್ಠ 12ನೇ ತರಗತಿ ಪಾಸ್ ಆಗಿರಬೇಕು ಅಂತವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ ಎಷ್ಟು:- ಪೋಸ್ಟ್ ಆಫೀಸ್ ನಲ್ಲಿ ಖಾಲಿ ಇರುವ ಈ ನೇರ ಪ್ರತಿನಿಧಿ ಹಾಗೂ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ
ಈ ಹುದ್ದೆಗಳಿಗೆ ಯಾರು (Post office jobs) ಅರ್ಜಿ ಸಲ್ಲಿಸಬಹುದು..?
ಸ್ನೇಹಿತರೆ ಅಂಚೆ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ನೇರ ಪ್ರತಿನಿಧಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಿರುದ್ಯೋಗಿಗಳಾಗಿರಬೇಕು ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು ಮತ್ತು ಮಾಜಿ ವಿಮಾ ಕಂಪನಿಗಳಲ್ಲಿ ಸಲಹೆಗಾರರಾಗಿ ಸೇವೆ ಸಲ್ಲಿಸಿದವರು ಹಾಗೂ ಅಂಗನವಾಡಿ ಕಾರ್ಯಕರ್ತರು ಮತ್ತು ಮಹಿಳಾ ಮಂಡಳಿ ಕಾರ್ಯಕರ್ತರು ಹಾಗೂ ಮಾಜಿ ಗ್ರಾಮ ಪಂಚಾಯಿತಿ ಸದಸ್ಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ
ಅದೇ ರೀತಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ನಿವೃತ್ತ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರರು ಹಾಗೂ ಭೀಮ ಉತ್ಪನ್ನಗಳನ್ನು ಮಾರಾಟ ಮಾಡುವವರು ಮತ್ತು ಕಂಪ್ಯೂಟರ್ ಜ್ಞಾನ ಹಾಗೂ ಸ್ಥಳೀಯ ಪ್ರದೇಶದಲ್ಲಿ ಜ್ಞಾನ ಹೊಂದಿರುವವರು ಮತ್ತು ನಿವೃತ್ತಿ ಗ್ರಾಮೀಣ ಅಂಚೆ ಸೇವಕರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಸಂಪರ್ಕಿಸಿ:– ಸ್ನೇಹಿತರೆ ಈ ಹುದ್ದೆಗಳ ನೇಮಕಾತಿ ಕುರಿತು ಯಾವುದೇ ಮಾಹಿತಿ ಹಾಗೂ ಹೆಚ್ಚಿನ ಮಾಹಿತಿ ಪಡೆಯಲು ನೀವು ಕೆಳಗಡೆ ನೀಡಿರುವ ದೂರವಾಣಿ ಸಂಖ್ಯೆ ಅಥವಾ ವಿಳಾಸಕ್ಕೆ ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಬಹುದು
- ಅಂಚೆ ಅಧಿಕ್ಷಕರ ಕಾರ್ಯಾಲಯ,
- ಹತ್ತಿರದ ಅಂಚೆ ಕಚೇರಿ ಬಳ್ಳಾರಿ
ಮೊಬೈಲ್ ನಂಬರ್:- 9481694420
ದೂರವಾಣಿ ಸಂಖ್ಯೆ:- 08392266037
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ನಿಮಗೆ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿ ಪಡೆಯಲು ಬಯಸುತ್ತಿದ್ದೀರಾ ಹಾಗಾದರೆ ನೀವು ನಮ್ಮ ಟೆಲಿಗ್ರಾಂ ಚಾನಲ್ ಗಳನ್ನು ಮತ್ತು ವಾಟ್ಸಪ್ ಚಾನಲ್ ಗಳನ್ನು ಫಾಲೋ ಮಾಡಿ ಅಂದರೆ ಮಾತ್ರ ನಿಮಗೆ ಎಲ್ಲಾ ಮಾಹಿತಿಗಳು ಹಾಗೂ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳು ಪ್ರತಿದಿನ ಸಿಗುತ್ತವೆ
New Rules for Ration Card: ಜೂನ್ 1 ರಿಂದ ರೇಷನ್ ಕಾರ್ಡ್ ಇದ್ದವರಿಗೆ ಹೊಸ ರೂಲ್ಸ್.! ತಪ್ಪದೇ ಮಾಹಿತಿ ತಿಳಿಯಿರಿ