Vidyasiri Scholarship 2025: ವಿದ್ಯಾಸಿರಿ ಸ್ಕಾಲರ್ಶಿಪ್ ಅರ್ಜಿ ಆಹ್ವಾನ.! ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳ ವಿವರ
ನಮಸ್ಕಾರ ಸ್ನೇಹಿತರೆ ಕರ್ನಾಟಕ ಸರಕಾರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇದೀಗ ವರ್ಷಕ್ಕೆ 15000 ಸ್ಕಾಲರ್ಶಿಪ್ ನೀಡಲು ಮುಂದಾಗಿದೆ ಹಾಗೂ ಈ ಸ್ಕಾಲರ್ಶಿಪ್ ಹಣ ಹೆಚ್ಚಳದ ಕುರಿತು ಸಿಎಂ ಸಿದ್ದರಾಮಯ್ಯನವರು ಹೊಸ ಮಾಹಿತಿ ನೀಡಿದ್ದಾರೆ ಹಾಗಾಗಿ ಈ ಒಂದು ಲೇಖನ ಮೂಲಕ ವಿದ್ಯಾಸಿರಿ ಸ್ಕಾಲರ್ಶಿಪ್ ಮೂಲಕ ಇನ್ನು ಮುಂದೆ ಎಷ್ಟು ಹಣ ಸಿಗುತ್ತೆ ಹಾಗೂ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ
ಗೃಹಲಕ್ಷ್ಮಿ 2000 ಹಣ ಬಿಡುಗಡೆಯ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ ವಿವರ
ವಿದ್ಯಾಸಿರಿ ವಿದ್ಯಾರ್ಥಿ ವೇತನ (Vidyasiri Scholarship 2025)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಯೋಜನೆ ಅಡಿಯಲ್ಲಿ ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಕಡೆಯಿಂದ ವಾರ್ಷಿಕ 15,000 ಹಣವನ್ನು ಆಹಾರ ಮತ್ತು ವಸತಿ ಮತ್ತು ಶೈಕ್ಷಣಿಕ ವೆಚ್ಚಗಳ ಭರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಸ್ಕಾಲರ್ಶಿಪ್ ಮೂಲಕ ನೀಡುತ್ತಿದೆ ಮತ್ತು ಈ ಸ್ಕಾಲರ್ಶಿಪ್ ಹಣ ಹೆಚ್ಚಳದ ಬಗ್ಗೆ ಸಿಎಂ ಸಿದ್ದರಾಮಯ್ಯನವರು ಹೊಸ ಮಾಹಿತಿ ಬಿಡುಗಡೆ ಮಾಡಿದ್ದಾರೆ

ಹೌದು ಸ್ನೇಹಿತರೆ ನಮ್ಮ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ವಿದ್ಯಾಸಿರಿ ಸ್ಕಾಲರ್ಶಿಪ್ ಮೂಲಕ ಇನ್ನು ಮುಂದೆ ಮಡಿವಾಳ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 2000 ಅಂದರೆ 10 ತಿಂಗಳಿಗೆ 20,000 ಹಣವನ್ನು ವಿದ್ಯಾಸಿರಿ ವಿದ್ಯಾರ್ಥಿ ವೇತನದ ಮೂಲಕ ನೀಡಲಾಗುತ್ತದೆ ಎಂದು ಘೋಷಣೆ ಮಾಡಿದ್ದಾರೆ.!
ಹೌದು ಸ್ನೇಹಿತರೆ ಈ ಹಿಂದೆ ಈ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 1,500 ಯಂತೆ ವರ್ಷಕ್ಕೆ 10 ತಿಂಗಳಿಗೆ 15000 ಹಣ ನೀಡಲಾಗುತ್ತಿತ್ತು ಆದರೆ ಇದೀಗ ಸಿಎಂ ಸಿದ್ದರಾಮಯ್ಯನವರು ಈ ಒಂದು ವಿದ್ಯಾರ್ಥಿ ವೇತನದ ಹಣದ ಮೊತ್ತವನ್ನು ತಿಂಗಳಿಗೆ 500 ಹೆಚ್ಚಳ ಮಾಡಿ ವರ್ಷಕ್ಕೆ 10 ತಿಂಗಳಿಗೆ 20,000 ಹಣ ನೀಡಲು ಘೋಷಣೆ ಮಾಡಿದ್ದಾರೆ ಇದರಿಂದ ವಿದ್ಯಾರ್ಥಿಗಳಿಗೆ ಇನ್ನಷ್ಟು ಉಪಯೋಗ ಆಗುತ್ತದೆ
ವಿದ್ಯಾಸಿರಿ ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಜಿ ಸಲ್ಲಿಸಬಹುದು..?
ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಭಾರತದ ಪ್ರಜೆಯಾಗಿರಬೇಕು ಹಾಗೂ ಹತ್ತನೇ ತರಗತಿ ನಂತರ ಉನ್ನತ ಶಿಕ್ಷಣ ಪಡಿತ್ತಿರುವಂತಹ ಮಡಿವಾಳ ಸಮಾಜದ ವರ್ಗದ ವಿದ್ಯಾರ್ಥಿಗಳು ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಮತ್ತು ಪ್ರವರ್ಗ – 1 ಹಾಗೂ ಪ್ರವರ್ಗ 2A, 2B, & 3A, 3B ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳನ್ನು ನಿಗದಿ ಮಾಡಲಾಗಿದೆ ಇದಕ್ಕೆ ಸಂಬಂಧಿಸಿದ ವಿವರವನ್ನು ಕೆಳಗಡೆ ತಿಳಿಸಲಾಗಿದೆ
ವಿದ್ಯಾಸಿರಿ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಗಳಾಗಿರಬೇಕು
- ವಿದ್ಯಾಸಿರಿ ಸ್ಕಾಲರ್ಶಿಪ್ ಮೂಲಕ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುತ್ತಿರಬೇಕು ಹಾಗೂ ಅವರು ಅಧ್ಯಯನ ಮಾಡುತ್ತಿರುವ ಕಾಲೇಜಿನಿಂದ ಕನಿಷ್ಠ ದೂರದಲ್ಲಿ ಗ್ರಾಮೀಣ ಅಥವಾ ನಗರ ಅಥವಾ ಪಟ್ಟಣದಲ್ಲಿ ವಾಸ ಮಾಡುತ್ತಿರಬೇಕು
- ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಗೆ ಹುಡುಗರು ಮತ್ತು ಹುಡುಗಿಯರು ಅರ್ಜಿ ಸಲ್ಲಿಸಬಹುದು
- ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ವಿದ್ಯಾರ್ಥಿಗಳು ಕನಿಷ್ಠ ಇಂದಿನ ತರಗತಿಯಲ್ಲಿ 40% ಗಿಂತ ಹೆಚ್ಚಿನ ಅಂಕ ಪಡೆದಿರಬೇಕು
- ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೇರಿರಬೇಕು
- ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.30 ಲಕ್ಷ ಮೀರಬಾರದು
ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುವ ಅಗತ್ಯ ದಾಖಲಾತಿಗಳ ವಿವರ..?
- ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ವಿದ್ಯಾರ್ಥಿಯ ಪೋಷಕರ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಪ್ರವೇಶ ಪ್ರಮಾಣ ಪತ್ರ
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
- ವಿದ್ಯಾರ್ಥಿಯ ಮೊಬೈಲ್ ನಂಬರ್
- ಹಿಂದಿನ ತರಗತಿಯ ಎಲ್ಲಾ ಅಂಕಪಟ್ಟಿಗಳು
- ಇತರೆ ಅಗತ್ಯ ದಾಖಲಾತಿಗಳು
ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ಅಥವಾ ನಿಮ್ಮ ಮನೆಯಲ್ಲಿ ಇರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾಸಿರಿ ಸ್ಕಾಲರ್ಶಿಪ್ ಯೋಚನೆಯ ಮೂಲಕ ಹಣ ಪಡೆಯಲು ಬಯಸುತ್ತಿದ್ದರೆ ನೀವು ಈ ಒಂದು ಸ್ಕಾಲರ್ಶಿಪ್ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಮಾಹಿತಿ ತಿಳಿದುಕೊಳ್ಳಬಹುದು ಹಾಗೂ ಈ ಒಂದು ವಿದ್ಯಾಸಿರಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಕೆಳಗಡೆ ನೀಡಿದ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ನಿಮಗೆ ವಿವಿಧ ಸ್ಕಾಲರ್ಶಿಪ್ ಯೋಚನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ವಿವಿಧ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ವಿವಿಧ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಪ್ರಮುಖ ಯೋಜನೆಗಳು ಹಾಗೂ ವಿವಿಧ ಮಾಹಿತಿಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ